ETV Bharat / state

ಹನಿ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಸುಳ್ಳಾದ್ರೆ ರಾಜೀನಾಮೆ- ಶಾಸಕ ಸುಬ್ಬಾರೆಡ್ಡಿ

ಹನಿ ನೀರಾವರಿ ಯೋಜನೆಯಲ್ಲಿ ಸರ್ಕಾರಕ್ಕೆ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾರೆ. ಈ ಆರೋಪ ಸುಳ್ಳಾದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಹನಿ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ
ಹನಿ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ
author img

By

Published : Jan 7, 2022, 9:11 PM IST

ಚಿಕ್ಕಬಳ್ಳಾಪುರ: ಹನಿ ನೀರಾವರಿ ಯೋಜನೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಅದನ್ನು ನಾನೇ ಸ್ವತಃ ಪತ್ತೆ ಮಾಡಿದ್ದೇನೆ. ನನ್ನ ಆರೋಪ ಸುಳ್ಳಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದ್ದಾರೆ.

ಹನಿ ನೀರಾವರಿ ಯೋಜನೆಯಲ್ಲಿ ಸರ್ಕಾರಕ್ಕೆ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೋಸ ಮಾಡಿದ್ದಾರೆ. ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಂದ ಭ್ರಷ್ಟಾಚಾರ ನಡೆದಿದೆ. ಬೋರ್ ವೆಲ್, ಬಾವಿಗಳೇ ಇಲ್ಲದವರಿಗೆ ಹನಿ ನೀರಾವರಿ ಯೋಜನೆ ಕೊಟ್ಟಿದ್ದಾರೆ. ಫಲಾನುಭವಿಗಳ ಪಟ್ಟಿ ಹಿಡಿದು ನಾನೇ ನೇರವಾಗಿ ಪರಿಶೀಲನೆ ನಡೆಸಿದ್ದು, ಭ್ರಷ್ಟಾಚಾರ ನಡೆದಿರೋದು ಸಾಬೀತಾಗಿದೆ ಎಂದು ಹೇಳಿದರು.

ಈ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕೇಳಿದರೆ ಏನೂ ಗೊತ್ತಿಲ್ಲ ಅಂತಾರೆ. ಭ್ರಷ್ಟಾಚಾರ ನಡೆದಿದ್ರೂ ಹಿರಿಯ ಅಧಿಕಾರಿಗಳು ಏನು ಕಡಲೇಕಾಯಿ ತಿಂತಿದ್ರಾ? ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.