ETV Bharat / state

ಬೈಕ್​ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸವಾರರ ಸಾವು - ಬೈಕ್​ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಬಾಗೇಪಲ್ಲಿ ಪಟ್ಟಣ ಸಮೀಪದ ಕಾರಕೂರು ಕ್ರಾಸ್​ ಬಳಿ ಎರಡು ಬೈಕ್​ಗಳ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ.

death
ಇಬ್ಬರು ಸಾವು
author img

By

Published : Feb 25, 2020, 3:23 PM IST

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಪಟ್ಟಣ ಸಮೀಪದ ಕಾರಕೂರು ಕ್ರಾಸ್​ ಬಳಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಗಂಭೀರ ಗಾಯಗೊಂಡಿದ್ದಾನೆ.

ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ಪ್ರವೀಣ್ (20) ವನಗಾನಪಲ್ಲಿ ಗ್ರಾಮದ ಈಶ್ವರ್ (20) ಮೃತಪಟ್ಟ ಯುವಕರು.

ಯಲ್ಲಂಪಲ್ಲಿ ಕಡೆಯಿಂದ ಬರುತ್ತಿದ್ದ ಒಬ್ಬ ಬೈಕ್​ ಸವಾರ, ಬಾಗೇಪಲ್ಲಿ ಕಡೆಯಿಂದ ಬರುತ್ತಿದ್ದ ಮತ್ತೊಬ್ಬ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೆಲ್ಮೆಟ್​ ಧರಿಸದಿದ್ದದ್ದೇ ಇಬ್ಬರ ಸಾವಿಗೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಮೃತ ದೇಹಗಳನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಈ ಪ್ರಕರಣ ಬಾಗೇಪಲ್ಲಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.