ಚಿಕ್ಕಬಳ್ಳಾಪುರ: ಪಶು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ 12 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿರುವ ಬಿಂಧುಜ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಬೆಳ್ಳೂಟಿ ಗ್ರಾಮದ ಕೃಷಿ ಕಾರ್ಮಿಕ ವೆಂಕಟೇಶ್ ಅವರ ಪುತ್ರಿ ಬಿಂಧುಜ ಈ ಮಹತ್ತರ ಸಾಧನೆ ಮಾಡಿದ್ದಾರೆ. ಹಳ್ಳಿಯಲ್ಲೇ ವಿದ್ಯಾಭ್ಯಾಸ ಮಾಡಿ, ಆನಂತರ ವೈದ್ಯಕೀಯ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡು ಸದ್ಯ ಉತ್ತರ ಪ್ರದೇಶದ ಬರೇಲಿಯಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದಾರೆ.
ಬಡತನದ ನಡುವೆಯೂ ಕಠಿಣ ಶ್ರಮವಹಿಸಿ 12 ಚಿನ್ನದ ಪದಕಗಳನ್ನು ಪಡೆದಿರುವ ಬಿಂಧುಜ ಈಗ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.