ಚಿಕ್ಕಬಳ್ಳಾಪುರ: ಇಲ್ಲಿಯವರೆಗೆ ನಾಲ್ಕು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಲಕ್ಷಾಂತರ ಹಕ್ಕಿ, ಕೋಳಿಗಳು ಸಾವನ್ನಪ್ಪಿವೆ. ಇದೀಗ ಈ ಭೀತಿ ಚಿಕ್ಕಬಳ್ಳಾಪುರ ಜಿಲ್ಲೆಗೂ ಎದುರಾಗಿದೆ.
ನಗರದ ಹೊರವಲಯದ ಜಿಲ್ಲಾಡಳಿತ ಭವನದ ಎದುರಿರುವ ಅಮಾನಿ ಗೋಪಾಲಕೃಷ್ಣ ಕೆರೆಯಂಗಳದಲ್ಲಿ ಪಕ್ಷಿಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತಿರುವ ದೃಶ್ಯ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಕ್ಷಿಗಳು ದೇಶ-ವಿದೇಶಗಳಿಂದ ಕೆರೆಯಂಗಳಕ್ಕೆ ವಲಸೆ ಬಂದಿದ್ದು, ಇವುಗಳಲ್ಲಿ ಸಾಕಷ್ಟು ಪಕ್ಷಿಗಳು ಅಲ್ಲಲ್ಲಿ ಸಾವನ್ನಪ್ಪಿವೆ. ಹಲವು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಓದಿ: 'ಬಿಎಸ್ವೈ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರವಾಹ, ಬರ, ಕೊರೊನಾ ಎದುರಾದವು'
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪಕ್ಷಿಗಳ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಿದ್ದಾರೆ.