ಚಿಕ್ಕಬಳ್ಳಾಪುರ: ಮೈತ್ರಿ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ದೋಸ್ತಿ ಆಡಳಿತದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರಿಗೆ ಮಾನಮರ್ಯಾದೆ ಇದ್ರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸರ್ಕಾರ ಈವರೆಗೂ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇನ್ನೂ ಯಡಿಯೂರಪ್ಪ ವಿರುದ್ದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಯಾವುದೇ ಆಪರೇಷನ್ ಕಮಲ ಮಾಡಿಲ್ಲ. ಕುಮಾರಸ್ವಾಮಿಯ ಆಡಳಿತಕ್ಕೆ ಬೇಸತ್ತು ಅವರ ಶಾಸಕರು ರಾಜೀನಾಮೆ ಕೊಡುತ್ತಿದ್ದಾರೆ ಎಂದು ಮಂಜುನಾಥ್ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.