ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಕೇಂದ್ರದ ಅನುದಾನ ನೇರವಾಗಿ ಗ್ರಾಮ ಪಂಚಾಯತ್‌ಗಳಿಗೆ ತಲುಪುವುದರಿಂದ ಗ್ರಾಮಗಳ ಅಭಿವೃದ್ದಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿಯ ಗ್ರಾಪಂ ಚುನಾವಣೆಗಳನ್ನು ಪಕ್ಷದ ವರಿಷ್ಠರು ಗಂಭೀರವಾಗಿ ತೆಗೆದುಕೊಂಡಿದ್ದಾರೆಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಾಗೇಪಲ್ಲಿ ಪಟ್ಟಣದ ಎಸ್‌ಎಲ್‌ಎನ್ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 36 ಜಿಲ್ಲೆಗಳಲ್ಲಿ ಆರು ತಂಡಗಳು ಪ್ರವಾಸ ಕೈಗೊಂಡಿವೆ.
ಶೇ.80ರಷ್ಟು ಕಾರ್ಯಕರ್ತರನ್ನು ಗ್ರಾಪಂ ಚುನಾವಣೆಯಲ್ಲಿ ಗೆಲ್ಲಿಸಿ ಪಕ್ಷವನ್ನು ಗಟ್ಟಿಗೊಳಿಸಬೇಕೆಂಬುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ಕನಸಾಗಿದೆ. ಹಳ್ಳಿಯಿಂದ ದಿಲ್ಲಿಯವರೆಗೂ ಪಕ್ಷವನ್ನು ಅಧಿಕಾರಕ್ಕೆ ತರುವುದೇ ಗ್ರಾಮ ಸ್ವರಾಜ್ಯ ಸಮಾವೇಶದ ಉದ್ದೇಶ ಎಂದರು.
"ಗ್ರಾಮ ಗ್ರಾಮದಲ್ಲೂ ಕಮಲ ಅರಳಬೇಕು" ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನೇರ-ಅತಿ ಹೆಚ್ಚು ಅನುದಾನದ ಮೂಲಕ ಪಂಚಾಯತ್‌ಗಳನ್ನು ಸಶಕ್ತೀಕರಣಗೊಳಿಸಿದೆ. ಗ್ರಾಮಗಳು ಸಶಕ್ತವಾದರೆ ದೇಶ ಬಲಿಷ್ಠವಾಗಲು ಸಾಧ್ಯ ಎಂಬ ಮಹಾತ್ಮ ಗಾಂಧಿಯವರ ಚಿಂತನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರವೂ ಪಂಚಾಯತ್‌ಗಳನ್ನು ಬಲಪಡಿಸುತ್ತಾ ಸಾಗಿದೆ ಎಂದರು.
ಸುಮ್ನೆ ಯಾರೂ ಆತ್ಮಹತ್ಯೆ ಮಾಡ್ಕೊಳಲ್ಲ, ತನಿಖೆಯಿಂದ ಎಲ್ಲಾ ಹೊರಬರಲಿ : ಡಿಕೆಶಿ
ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಗ್ರಾಮ ಸ್ವರಾಜ್ಯ ಪರಿಕಲ್ಪನೆಯ ಕನಸು ಬಿತ್ತುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.