ETV Bharat / state

ಚಿಕ್ಕಬಳ್ಳಾಪುರ: ರೈಲ್ವೆ ಹಳಿ ಬಳಿ ಯುವಕನ ಶವ ಪತ್ತೆ - suspiciously near a railway track

ನಿನ್ನೆ ಬೆಳಿಗ್ಗೆ ಜಿಲ್ಲಾಡಳಿತ ಭವನಕ್ಕೆ ಕಾರ್ಯ ನಿಮಿತ್ತ ಆಗಮಿಸಿದ್ದ ಈ ವ್ಯಕ್ತಿ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕಾಟ ನಡೆಸಿದ್ದರು.

ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ
author img

By

Published : Jan 6, 2021, 6:55 PM IST

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಕಚೇರಿಗೆ ಕಾರ್ಯ ನಿಮಿತ್ತ ಬಂದ ವ್ಯಕ್ತಿಯ ಶವ ರೈಲ್ವೆ ಹಳಿಯ ಬಳಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಶಿಡ್ಲಘಟ್ಟ ಗಾಂಧಿನಗರದ ನಿವಾಸಿ ಬರ್ಕತ್(30) ಮೃತ ವ್ಯಕ್ತಿ. ಈತ ನಿನ್ನೆ ಬೆಳಿಗ್ಗೆ ಜಿಲ್ಲಾಡಳಿತ ಭವನಕ್ಕೆ ಕೆಲಸದ ನಿಮಿತ್ತ ಆಗಮಿಸಿದ್ದ. ಆದರೆ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಮನೆಯವರು ಹುಡುಕಾಟ ನಡೆಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರಿನ ರೈಲ್ವೆ ಹಳಿ ಬಳಿ ಈತ ಶವ ಪತ್ತೆಯಾಗಿದೆ.

ರೈಲ್ವೆ ಹಳಿ ಬಳಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿ, ನೀರಿನ ಪಾಕೆಟ್​ಗಳು ಪತ್ತೆಯಾಗಿದೆ. ಬರ್ಕತ್​ನ ತಲೆ ಹಾಗೂ ಕಾಲಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.