ಬೆಂಗಳೂರು: ಬೈಕ್ ಸವಾರನ ಮೇಲೆ ಲಾರಿ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 07 ರ ಶಿಡ್ಲಘಟ್ಟ ರಸ್ತೆಯಲ್ಲಿ ಫ್ಲೈಓವರ್ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಮಧು ಸಾವನ್ನಪ್ಪಿದ ದುರ್ದೈವಿ. ಭಾನುವಾರ ರಜರ ಇರುವ ಹಿನ್ನೆಲೆ ವೀಕೆಂಡ್ ಎಂಜಾಯ್ ಮಾಡಲು ಆರು ಮಂದಿ ಸ್ನೇಹಿತರು ಬೈಕ್‍ಗಳಲ್ಲಿ ಬೆಂಗಳೂರಿನಿಂದ ಲೇಪಾಕ್ಷಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಮಧು ಸ್ಥಳದಲ್ಲೇ ಸಾವನ್ನಪಿದ್ದಾರೆ. ಇನ್ನೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ಬದಿಯಲ್ಲಿ ಕೆಟ್ಟು ನಿಂತ ಲಾರಿಗೆ ಬೈಕ್ ಸವಾರ ರಭಸವಾಗಿ ಲಾರಿಯ ಬಲಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ತಕ್ಷಣ ಹಿಂಬದಿಯಿಂದ ಬರುತ್ತಿದ್ದ ಲಾರಿ ಮಧು ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ.