ETV Bharat / state

ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ: 9 ಮಂದಿಗೆ ಗಾಯ - ಈಟಿವಿ ಭಾರತ ಕನ್ನಡ

ಆಟೋದಲ್ಲಿ ಇದ್ದ ಗಾಯಾಳುಗಳು ದೊಡ್ಡಬಳ್ಳಾಪುರದವರಾಗಿದ್ದು, ಗೌರಿಬಿದನೂರು ತಾಲೂಕಿನ ಬೈಚಾಪುರ ಗ್ರಾಮದ ಸಂಬಂಧಿಕರ ಮನೆಯ ಶುಭ ಕಾರ್ಯಕ್ಕೆ ಹೋಗಿ ವಾಪಸ್ಸಾಗುತ್ತಿದ್ದರು.

car-collided-with-autorickshaw-from-behind
ಆಟೋರಿಕ್ಷಾಗೆ ಹಿಂಬದಿಯಿಂದ ಕಾರು ಡಿಕ್ಕಿ
author img

By

Published : Oct 16, 2022, 9:36 PM IST

Updated : Oct 16, 2022, 10:20 PM IST

ಚಿಕ್ಕಬಳ್ಳಾಪುರ: ಮದ್ಯ ಸೇವಿಸಿ ಕಾರು ಚಲಾಯಿಸುತ್ತಿದ್ದ ಚಾಲಕ ಆಟೋ ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 9 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ಹಿಂದೂಪುರದಿಂದ ಗೌರಿಬಿದನೂರಿನ ಕಡೆ ಬರುತ್ತಿದ್ದಾಗ ಹಳೆಯ ಆರ್‌ಟಿಒ ಕಚೇರಿ ಬಳಿಯಿದ್ದ ಹಂಪ್ಸ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ಆಟೋ ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಆಟೋರಿಕ್ಷಾಗೆ ಹಿಂಬದಿಯಿಂದ ಕಾರು ಡಿಕ್ಕಿ

ಆಟೋ ರಿಕ್ಷಾ ಹಿಂಬದಿಯಲ್ಲಿ ಕೂತಿದ್ದ ನಾಲ್ವರು ಸೇರಿದಂತೆ 9 ಮಂದಿಗೆ ಗಾಯಗಳಾಗಿವೆ. ಆಟೋದಲ್ಲಿ ಇದ್ದ ಗಾಯಾಳುಗಳು ದೊಡ್ಡಬಳ್ಳಾಪುರದವರಾಗಿದ್ದು, ಗೌರಿಬಿದನೂರು ತಾಲೂಕಿನ ಬೈಚಾಪುರ ಗ್ರಾಮದ ಸಂಬಂಧಿಕರ ಮನೆಯ ಶುಭ ಕಾರ್ಯಕ್ಕೆ ಹೋಗಿ ವಾಪಸ್ಸಾಗುತ್ತಿದ್ದರು. ಘಟನೆಯಿಂದ ಆಕ್ರೋಶಗೊಂಡ ಗಾಯಾಳುಗಳ ಸಂಬಂಧಿಕರು ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಗಾಜನ್ನು ಪುಡಿ ಮಾಡಿದ್ದಾರೆ.

ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಗೌರಿಬಿದನೂರು ನಗರ ಪೊಲೀಸರು ಕಾರು ಸಮೇತ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಗಾಯಾಳುವನ್ನು ಆಸ್ಪತ್ರೆಗೆ ಕಾರಿನಲ್ಲಿ ಕರೆದೊಯ್ದು ಶಿವಮೊಗ್ಗ ಎಎಸ್​ಪಿ.. ವಿಧಿಯಾಟಕ್ಕೆ ವ್ಯಕ್ತಿ ಬಲಿ

Last Updated : Oct 16, 2022, 10:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.