ಚಿಕ್ಕಮಗಳೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಆಗುಂಬೆಯಿಂದ ಕೊಪ್ಪಕ್ಕೆ ಬರುತ್ತಿರುವಾಗ ಕೊಪ್ಪ ಹರಿಹರಪುರ ರಸ್ತೆಯ ಬಳಿ ಬರುವ ನಾಗಲಾಪುರ ಸೇತುವೆ ಸಮೀಪ ಈ ಅಪಘಾತ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಕೊಪ್ಪದ ಗುಣವಂತೆ ಮೆಡಿಕಲ್ ಮಾಲೀಕರಾದ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಎಂಬುವವರು ಮೃತರಾಗಿದ್ದಾರೆ.
ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
(ಇದನ್ನೂ ಓದಿ: 18 ವರ್ಷಗಳ ದಾಂಪತ್ಯ ಜೀವನಕ್ಕೆ ತೆರೆ ಎಳೆದ ಧನುಷ್!)