ಚಿಕ್ಕಬಳ್ಳಾಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 1ರಂದು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಗೆ ಭೇಟಿ ನೀಡಲಿದ್ದು ಪೊಲೀಸ್ ಇಲಾಖೆ ಭರದ ಸಿದ್ದತೆ ನಡೆಸುತ್ತಿದೆ. ಡಾ.ಶಿವಕುಮಾರ ಶ್ರೀಗಳ ಜನ್ಮ ದಿನಾಚರಣೆ ಅಂಗವಾಗಿ ಸಚಿವರು ತುಮಕೂರಿಗೆ ಭೇಟಿ ನೀಡಲಿದ್ದು ಬಳಿಕ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀಸತ್ಯ ಸಾಯಿ ಆಶ್ರಮಕ್ಕೆ ತೆರಳಿ 400 ಬೆಡ್ಗಳ ಸತ್ಯ ಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಹೊರಟು ನಂತರ ಅಲ್ಲಿಂದ ಮುದ್ದೇನಹಳ್ಳಿಯ ಸತ್ಯಸಾಯಿ ಕ್ರೀಡಾಂಗಣಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆ. ನಂತರ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸತ್ಯಸಾಯಿ ಆಶ್ರಮದ ಆವರಣದಲ್ಲಿ 400 ಬೆಡ್ಗಳ ಶ್ರೀ ಸತ್ಯ ಸಾಯಿ ಸರಳಾ ಮೆಮೋರಿಯಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೂಮಿಪೂಜೆ ನೆರೆವೇರಿಸಲಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಎಸ್ಪಿ ಸಭೆ ನಡೆಸಿ, ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಹೆಲಿಪ್ಯಾಡ್ನಿಂದ ಕಾರ್ಯಕ್ರಮದ ವೇದಿಕೆಯವರೆಗೂ ಬಂದು ಹೋಗುವ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಸಂಘರ್ಷದ ವಾತಾವರಣದಲ್ಲಿಯೂ ಶಾಂತಿ - ಸುವ್ಯವಸ್ಥೆ ಕಾಪಾಡಿದ್ದೇವೆ: ಸಿಎಂ ಬೊಮ್ಮಾಯಿ