ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವನ ಶವ ಪತ್ತೆಯಾದ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಝಾನ್ಸಿ ಕ್ರೀಡಾಂಗಣದ ಬಳಿ ಶವ ಪತ್ತೆಯಾಗಿದ್ದು, ಮೃತನನ್ನು ಸುಬ್ರಮಣಿ (50) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಚಿಂತಾಮಣಿ ನಗರದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಪ್ರತಿನಿತ್ಯ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದರು. ಆದರೆ ಇದೀಗ ಸುಬ್ರಮಣಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಈ ಸಾವಿನ ಸುತ್ತ ಅನುಮಾನಗಳ ಹುತ್ತವೇ ಬೆಳೆದಿದೆ. ಸ್ಥಳಕ್ಕೆ ಚಿಂತಾಮಣಿ ಪೊಲೀಸರು ಭೇಟಿ ನೀಡಿ, ಮೃತ ದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಭೋವಿ ಅಭಿವೃದ್ಧಿ ನಿಗಮದಲ್ಲಿ ಲೂಟಿಗೆ ಯತ್ನ ಆರೋಪ: ನಿಗಮ ಮಂಡಳಿ ನಿರ್ದೇಶಕನ ಬಂಧನಕ್ಕೆ ಪೊಲೀಸರ ಶೋಧ