ಚಿಕ್ಕಬಳ್ಳಾಪುರ : ಕಿಡಿಗೇಡಿಗಳು ಒಣ ಹುಲ್ಲಿನ ಬಣವೆಗೆ ಬೆಂಕಿ ಹಾಕಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ದೊಡ್ಡನಚರ್ಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಯರಾಮ್ ಎಂಬ ರೈತನಿಗೆ ಸೇರಿದ್ದ 25 ಲೋಡ್ ಹುಲ್ಲಿನ ಬಣವೆ ಇದೆ. ನಿನ್ನೆ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು ಎರಡು ಲಕ್ಷ ರೂ. ಮೌಲ್ಯದ ಹುಲ್ಲು ಸುಟ್ಟು ಭಸ್ಮವಾಗಿದೆ.
ಕಿಡಿಗೇಡಿಗಳು ಬಣವೆಗೆ ಬೆಂಕಿ ಹಾಕಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟಿದ್ದಾರೆ. ಆದರೂ ಬೆಂಕಿ ಹತೋಟಿಗೆ ಬರಲಿಲ್ಲ.
ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಸರಿಯಾದ ಸಮಯಕ್ಕೆ ಬಾರದೆ ಇರೋದ್ರಿಂದ ಹುಲ್ಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.