ಚಿಕ್ಕಬಳ್ಳಾಪುರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4.90 ಲಕ್ಷ ರೂ. ಹಣವನ್ನು ಚಿಕ್ಕಬಳ್ಳಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ನಡುವೆ ಮಹಾರಾಷ್ಟ್ರ ಮೂಲದ ರಫೀಕ್ ಸಾಬೂದ್ದೀನ್ ಸೈಯದ್ ಎಂಬಾತನ ಕಾರಿನಲ್ಲಿ ದಾಖಲೆಯಿಲ್ಲದೆ ಹಣ ಸಾಗಿಸಲಾಗುತ್ತಿತ್ತು. ಈ ವೇಳೆ ತಾಲೂಕಿನ ಹೊಸಹುಡ್ಯ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಹಣ ವಶಕ್ಕೆ ಪಡೆದಿದ್ದಾರೆ.
ಚಿಂತಾಮಣಿಯಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಹೋಗುತ್ತಿದ್ದಾಗ ಚಿಕ್ಕಬಳ್ಳಾಪುರದ ಹೊಸಹುಡ್ಯ ಸಮೀಪದ ಚೆಕ್ ಪೋಸ್ಟ್ನಲ್ಲಿ ಕಾರು ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.