ETV Bharat / state

ಚಿಕ್ಕಬಳ್ಳಾಪುರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ: ರೈತರ ಮೊಗದಲ್ಲಿ ಸಂತಸ - ಮುಂಗಾರು ಮಳೆ

ಬರಪೀಡಿತ ಚಿಕ್ಕಬಳ್ಳಾಪುರದಲ್ಲಿ ಕಳೆದ ಮೂರು- ನಾಲ್ಕು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿದೆ. ಕಳೆದ 10 ವರ್ಷಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಮಳೆ ಆಗುತ್ತಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

Chikkaballapur rain
ಮಳೆ
author img

By

Published : Jul 3, 2020, 5:30 AM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಗಳು ತುಂಬಿಹರಿಯುತ್ತಿದ್ದು, ರೈತರ ಮುಖದಲ್ಲಿ ಸಂತಸ ಮೂಡಿದೆ.

ಬರಪೀಡಿತ ಚಿಕ್ಕಬಳ್ಳಾಪುರದಲ್ಲಿ ಕಳೆದ ಮೂರು- ನಾಲ್ಕು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿದೆ. ಕಳೆದ 10 ವರ್ಷಗಳಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಮಳೆ ಆಗುತ್ತಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ರೈತರು ಬಿತ್ತನೆ ಚಟುವಟಿಕೆಗಳಿಗೆ ಆರಂಭಿಸುವ ಸಿದ್ಧತೆಯಲ್ಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಬಾಗೇಪಲ್ಲಿ, ಚಿಂತಾಮಣಿ ಸೇರಿದಂತೆ ಗೌರಿಬಿದನೂರು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಮಳೆಯ ಸಂತಸದ ನಡುವೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿದಾಟಿದೆ. ಮಳೆಯಿಂದ ಸೊಂಕು ಹೆಚ್ಚಳ ಆಗಬಹುದೆಂಬ ಆತಂಕ ಜಿಲ್ಲಾಡಳಿತಕ್ಕೆ ತಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.