ಚಿಕ್ಕಬಳ್ಳಾಪುರ: ಒಂದೇ ಸಮಯದಲ್ಲಿ ಒಂದೇ ಹೆದ್ದಾರಿಯ ಕೆಲವೇ ಕಿಲೋಮೀಟರ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ - ಗೌರಿಬಿದನೂರು ಮಾರ್ಗ ಮಧ್ಯೆ ಇರುವ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಚಿಕ್ಕಹೊಸಳ್ಳಿ ಗ್ರಾಮದ 25 ವರ್ಷದ ಮುತ್ತೇಗೌಡ ತೀವ್ರ ರಕ್ತಸ್ರಾವದಿಂದ ಮೃತಪಟ್ಟರೆ, ಅದೇ ರಸ್ತೆಯ ನಾಚುಕುಂಟೆ ಗ್ರಾಮದ ಬಳಿ ಬೈಕ್ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದು ಪಿಯುಸಿ ವಿದ್ಯಾರ್ಥಿ ಆರೂಡಿ ಗ್ರಾಮದ 18 ವರ್ಷದ ಹರ್ಷವರ್ಧನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಎರಡು ಘಟನೆಗಳಿಗೆ ಸಂಬಂಧಿಸಿದಂತೆ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.