ETV Bharat / state

ಚಿಕ್ಕಬಳ್ಳಾಪುರದಲ್ಲಿ ಐವರಲ್ಲಿ ಕೊರೊನಾ ದೃಢ : ಸೋಂಕಿತರ ಸಂಖ್ಯೆ 136ಕ್ಕೆ ಏರಿಕೆ - Corona infection

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಐವರ ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ.

Chikkaballapur: Total number of infected people incresed to 136
ಚಿಕ್ಕಬಳ್ಳಾಪುರ: 24 ಗಂಟೆಗಳಲ್ಲಿ 5 ಕೊರೊನಾ ಪ್ರಕರಣ ದಾಖಲು...ಒಟ್ಟು ಸೋಂಕಿತರ ಸಂಖ್ಯೆ 136
author img

By

Published : May 30, 2020, 3:47 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, 24 ಗಂಟೆಗಳಲ್ಲಿ ಐದು ಸೋಂಕಿತರು ಪತ್ತೆಯಾಗಿದ್ದಾರೆ.

ನಿನ್ನೆ ಸಂಜೆ ಚಿಕ್ಕಬಳ್ಳಾಪುರ ಮೂಲದ 50 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಬೆಳಿಗ್ಗೆ ಜಿಲ್ಲೆಯ ನಾಲ್ಕು ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಇನ್ನು ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದಿರುವ 316 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ 105 ಜನರ ವರದಿ ಪಾಸಿಟಿವ್ ಬಂದಿದೆ.

ಜಿಲ್ಲೆಯಲ್ಲಿ ಇದುವರೆಗೂ 136 ಸೋಂಕಿತರಲ್ಲಿ ಮೂವರು ಮೃತಪಟ್ಟಿದ್ದಾರೆ. 20 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 114 ಸಕ್ರಿಯ ಪ್ರಕರಣಗಳಿದ್ದು, ಹಳೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.