ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಬಳಿಯ ದರ್ಗಾ ಆವರಣದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತು ಎಚ್ಚರಿಕೆ ಕೊಟ್ಟರೂ ಯಾವುದೇ ಪ್ರಯೋಜನವಾಗದ ಕಾರಣ ಅಧಿಕಾರಿಗಳೇ ಅಂಗಡಿಗಳಿಗೆ ನುಗ್ಗಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮುರುಗಮಲ್ಲ ಗ್ರಾಮದಲ್ಲಿ ಕಳೆದ ಕೆಲ ದಿನಗಳ ಹಿಂದೆ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆಯ ಹಾಗೂ ಪ್ಲಾಸ್ಟಿಕ್ ಬಗ್ಗೆ ಅರಿವು ಮೂಡಿಸಲಾಗಿತ್ತು. ಆದರೂ ಸಹ ಗ್ರಾಮದ ಕೆಲ ಹೋಟೆಲ್ ಹಾಗೂ ಅಂಗಡಿಗಳಲ್ಲಿ 50 ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ನ್ನು ಮಾರಾಟ ಮಾಡುತ್ತಿದ್ದರು.
ಈ ಹಿನ್ನೆಲೆ ಚಿಕ್ಕಬಳ್ಳಾಪುರ ವಕ್ಫ್ ಮಂಡಳಿಯ ಜಿಲ್ಲಾಧ್ಯಕ್ಷರಾದ ಬಿ.ಎಸ್. ರಫೀ ಉಲ್ಲಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಸೇರಿದಂತೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರು ಕೆಲ ಸದಸ್ಯರುಗಳು ಸೇರಿ ಅಂಗಡಿಗಳ ಮೇಲೆ ದಾಳಿ ಮಾಡಿ 50 ಮೈಕ್ರಾನ್ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ನ್ನು ಜಪ್ತಿ ಮಾಡಿದ್ದಾರೆ.