ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಹಮ್ಮಿಕೊಂಡಿರುವ 'ಜಿಲ್ಲಾಧಿಕಾರಿ ನಡೆ ಗ್ರಾಮಗಳ ಕಡೆ' ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಇಂದು ಚಾಲನೆ ನೀಡಿದರು.
ಗ್ರಾಮದ ಸರ್ಕಾರಿ ಪ್ರಾಥಮಿಕ ಆವರಣದಲ್ಲಿ ಗಿಡ ನೆಟ್ಟು, ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ಗ್ರಾಮದಲ್ಲಿ ಸಂಚರಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿಗಳಾದ ಎ.ಎನ್.ರಘುನಂದನ್ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.