ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಂಗಡಿ, ಮುಂಗಟ್ಟುಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವ ಮೂಲಕ ವಿರೋಧ ವ್ಯಕ್ತಪಡಿಸಲಾಗಿದೆ.
ನಗರದ, ಬಸ್ ನಿಲ್ದಾಣ, ಟಿ ಬಿ ರೋಡ್, ಕೋಟೆ ಸರ್ಕಲ್ ಸೇರಿದಂತೆ ಹಲವೆಡೆ ಭಿತ್ತಿ ಪತ್ರಗಳನ್ನು ಅಂಟಿಸಿ ಪೌರತ್ವ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಲವು ಅಂಗಡಿಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವಾಗ ಅಂಗಡಿಗಳ ಮಾಲೀಕರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಇನ್ನು ಇಂದು ಜಿಲ್ಲಾ ಬಂದ್ಗೆ ಕರೆ ನೀಡಿರುವ ಮುಸ್ಲಿಂ ಫೋರಂ ಹಾಗೂ ವಿವಿಧ ಸಂಘಟನೆಗಳು ಬೀದಿಗೆ ಇಳಿಯಲಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಂದರೆಯಾಗದಂತೆ ಮೂನ್ಸೂಚನೆ ನೀಡಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ 4 ಕೆ ಎಸ್ ಆರ್ ಪಿ, 9 ಡಿಎಆರ್ ತುಕಡಿ ಮತ್ತು 200 ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಿದೆ.