ಚಿಕ್ಕಬಳ್ಳಾಪುರ/ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಮೃತ್ ಪಾಲ್ಗೆ ಸೇರಿದ ಪಾರ್ಮ್ ಹೌಸ್ನಲ್ಲಿ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಹೊಬಳಿಯ ಹುಸಹುಡ್ಯಾ ಗ್ರಾಮದ ಸರ್ವೆ ನಂಬರ್ 234/4/, 247/2. 247/5ರ ಜಮೀನನ್ನು ನೆಟರಾಮ್ ಬನ್ಸಲ್ ಹೆಸರಿನಲ್ಲಿ ಬೇನಾಮಿಯಾಗಿ ಖರೀದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನೆಟರಾಮ್ ಬನ್ಸಲ್ ಹೆಸರಿನಲ್ಲಿ ಕೃಷಿ ಜಮೀನು ಖರೀದಿ ಮಾಡಿರುವ ಶಂಕೆ ಹಿನ್ನೆಲೆ ಸಿಐಡಿ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೌಲ್ ಮನೆ ಮೇಲೆ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ : ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಮನೆ ಮೇಲೆ ಸಿಐಡಿ ಅಧಿಕಾರಿಗಳು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಸಹಕಾರ ನಗರದಲ್ಲಿರುವ ಮನೆಗೆ ಪೌಲ್ ಅವರ ಉಪಸ್ಥಿತಿಯಲ್ಲಿ ತೆರಳಿ ಪರಿಶೀಲನೆ ನಡೆಸಿದರು. ಮನೆಯಲ್ಲಿದ್ದ ದಾಖಲಾತಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಈಗಾಗಲೇ ಎಡಿಜಿಪಿ ಅವರ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ನೇಮಕಾತಿ ಅಕ್ರಮದಿಂದ ಬಂದ ಕೋಟ್ಯಂತರ ರೂಪಾಯಿ ಹಣದಲ್ಲಿ ಎಡಿಜಿಪಿ ಪೌಲ್ ಅವರಿಗೆ ಶೇ.20 ರಷ್ಟು ಪಾಲು ಸಂದಾಯವಾಗಿರಬಹುದು ಎಂದು ಸಿಐಡಿಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ಪರಿಶೀಲನೆ ಕಾರ್ಯ ಜರುಗಿದೆ.
ಇದನ್ನೂ ಓದಿ : ಅಮೃತ್ ಪಾಲ್ ಕೇವಲ ಸೇಫ್ಟಿ ಪಿನ್, ಕಿಂಗ್ಪಿನ್ ಬಂಧನ ಯಾವಾಗ? ಪ್ರಿಯಾಂಕ್ ಖರ್ಗೆ ಪ್ರಶ್ನೆ