ಚಿಕ್ಕಬಳ್ಳಾಪುರ: ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಚಿಕ್ಕಬಳ್ಳಾಪುರ ತಾಲೂಕಿನಾದ್ಯಂತ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಒಟ್ಟು 254 ಮತಗಟ್ಟೆಗಳಿದ್ದು, 200622 ಮತದಾರರು ಮತವನ್ನು ಚಲಾಯಿಸಲಿದ್ದಾರೆ. ಅದರಲ್ಲಿ ಪುರುಷ ಮತದಾರರು 99825, ಮಹಿಳೆಯರು 100776 ಹಾಗೂ ಇತರೆ 21 ಮತದಾರರು ಮತ ಚಲಾಯಿಸಲಿದ್ದಾರೆ. ಇನ್ನು ಈ ಬಾರಿ ಬಿಇಎಲ್ ಸಂಸ್ಥೆಯ ಎಂ-3 ಮಾದರಿಯ ಇವಿಎಂ ಬಳಸಿಕೊಂಡು ಚುನಾವಣೆ ನಡೆಸಲಿದ್ದು, ಒಟ್ಟು 10 ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಕಚೇರಿಯಲ್ಲಿ 141 ದೂರು ನಿರ್ವಾಹಕ ಘಟಕ ಸ್ಥಾಪಿಸಲಾಗಿದೆ.
ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೈಕ್ ಜಾಥಾ, ರಂಗೋಲಿ ಸ್ಪರ್ಧೆ, ಕ್ರೀಡೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಇಒ ಪೌಝೀಯಾ ತುರನಮ್ ತಿಳಿಸಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಳವಡಿಸಿದ ಪ್ಲೆಕ್ಸ್, ಬ್ಯಾನರ್ಗಳನ್ನು 24 ಗಂಟೆಯೊಳಗೆ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ ತಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.