ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಎನ್ಆರ್ ಬಳಿ ನಡೆದಿದೆ.
ಇಲ್ಲಿನ ನಂದಿನಿ ಬೇಕರಿ ಮಾಲೀಕ ಅಶೋಕ್ ಮತ್ತು ಶೋ ರೂಮ್ ಶಿವಪ್ಪ ಮೃತರು. ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಪೇರೆಂಸಂದ್ರ ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.