ಚಿಕ್ಕಬಳ್ಳಾಪುರ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬಳಿ ನಡೆದಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ವಾಪಸಾಗುವಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ಮಂದಿಯ ಪೈಕಿ ನಾಲ್ಕು ಜನರಿಗೆ ತೀವ್ರ ಗಾಯಗಳಾಗಿವೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 7ರ ವರ್ಲಕೊಂಡ ಗ್ರಾಮದ ಬಳಿ ಘಟನೆ ನಡೆದಿದ್ದು, ಗಾಯಗೊಂಡವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪೆತ್ರೆಯಲ್ಲಿ ದಾಖಲಿಸಲಾಗಿದೆ.