ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷೇತರ ಅಭ್ಯರ್ಥಿ ಹಾಗೂ ಸಿಪಿಐಎಂಗೆ ಭಾರೀ ಮುಖಭಂಗ ಉಂಟಾಗಿದೆ.
ಕಳೆದ 10 ವರ್ಷಗಳಿಂದಲೂ ಬೀಚಗಾನಹಳ್ಳಿ ಸೊಸೈಟಿಯಲ್ಲಿ ಅಧಿಕಾರ ಹೊಂದಿದ್ದ ಕಾಂಗ್ರೆಸ್ ಮತ್ತೆ ಅಧಿಕಾರ ಗದ್ದುಗೆ ಏರುವುದು ನಿಶ್ಚಿತವಾಗಿದೆ. 15 ಸ್ಥಾನಗಳ ಪೈಕಿ 9 ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತರು ಗೆದ್ದು ಬೀಗಿದರೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಹಾಗೂ ಸಿಪಿಐಎಂ ಪಕ್ಷದಿಂದ ನಾಲ್ವರು ಗೆಲವು ಸಾಧಿಸಿದ್ದಾರೆ.