ಚಿಕ್ಕಬಳ್ಳಾಪುರ: ಗುಡಿಬಂಡೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದೆ.
ಹನ್ನೊಂದು ವಾರ್ಡ್ಗಳ ಅಂತಿಮ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ 6, ಜೆಡಿಎಸ್ 2 ಹಾಗೂ ಪಕ್ಷೇತರರು 3 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಕೂಡ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ.
ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.
ಮತ ಎಣಿಕೆ ಕೇಂದ್ರಕ್ಕೆ ಡಿ.ವೈ.ಎಸ್.ಪಿ ಕೆ.ರವಿಶಂಕರ್ ಭೇಟಿ ನೀಡಿದ್ದರು.
ಇದನ್ನೂ ಓದಿ: ಬಳ್ಳಾರಿ ಮಹಾನಗರ ಪಾಲಿಕೆ 'ಕೈ'ವಶ: ಬಿಜೆಪಿಗೆ ಮುಖಭಂಗ