ETV Bharat / state

93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ.. ಕಾಮಗಾರಿಗೆ ಸಿಎಂ, ಸಚಿವರಿಂದ ಚಾಲನೆ

ಐತಿಹಾಸಿಕ ತಾಣ ಮತ್ತು ಪಾರಂಪರಿಕ ಸ್ಮಾರಕಗಳಿಗೆ ನೆಲೆಯಾಗಿರುವ ನಂದಿ ಬೆಟ್ಟ ಟ್ರಕ್ಕಿಂಗ್, ಸೈಕ್ಲಿಂಗ್ ಮತ್ತು ಪ್ಯಾರಾಗ್ಲೈಡಿಂಗ್​ ನಂತಹ ಸಾಹಸ ಕ್ರೀಡೆಗಳಿಗೆ ಪ್ರಸಿದ್ಧಿ ಪಡೆದಿದೆ. ಇಂತಹ ತಾಣ ತಲುಪಲು ರೋಪ್‌ವೇಯ ವೇಗ ಮತ್ತು ಪರಿಸರ ಸ್ನೇಹಿ ಸಾರಿಗೆ ಸೌಲಭ್ಯ, ಅನುಕೂಲ ಕಲ್ಪಿಸುವುದರೊಂದಿಗೆ ತಲುಪುವ ಸಮಯ ಉಳಿಸಲಾಗುತ್ತದೆ.

construction-of-ropeway-to-nandi-hill
93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ
author img

By

Published : Mar 27, 2023, 7:08 PM IST

93.40 ಕೋಟಿ ವೆಚ್ಚದಲ್ಲಿ ನಂದಿ ಬೆಟ್ಟಕ್ಕೆ ರೋಪ್‌ ವೇ ನಿರ್ಮಾಣ

ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ಯಾಸೆಂಜರ್ ರೋಪ್‌ವೇ ನಿರ್ಮಾಣ ಮಾಡುವ ಕಾಮಗಾರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸುಧಾಕರ್, ಆರ್ ಅಶೋಕ್, ಎಂಟಿಬಿ ನಾಗರಾಜ್ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಅಸಂಖ್ಯಾತ ಪ್ರವಾಸಿಗರ ಬಹು ದಶಕಗಳ ಕನಸನ್ನು ನನಸಾಗಿಸುವ ಕಾರ್ಯಕ್ಕೆ ಇಂದು ಚಾಲನೆ ದೊರೆತಿದ್ದು, ಖ್ಯಾತ ಕನ್ನಡ ಚಲನಚಿತ್ರ ನಟ ಶಂಕರ್ ನಾಗ್ ಅವರು ಪಂಚಗಿರಿ ನಂದಿಗಿರಿಧಾಮದಲ್ಲಿ ರೋಪ್​ವೇ ನಿರ್ಮಿಸಬೇಕು ಎಂದು ಒತ್ತಾಸೆ ಪಟ್ಟಿದ್ದರು ಎಂದರು.

ರೋಪ್ ವೇ ಕಾಮಗಾರಿ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್‌ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ 93.40 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಸುಮಾರು 2.93 ಕಿ.ಮೀ ದೂರದ ರೋಪ್‌ವೇ ಅಭಿವೃದ್ಧಿಪಡಿಸಲಾಗುತ್ತದೆ. ಡೈನಾಮಿಕ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್ 30 ವರ್ಷಗಳ ರಿಯಾಯಿತಿ ಅವಧಿಯೊಂದಿಗೆ ನಿರ್ಮಾಣ, ವಿನ್ಯಾಸ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (DBFOT) ಚೌಕಟ್ಟಿನ ಮೇಲೆ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದರು.

ಐತಿಹಾಸಿಕ ತಾಣ ಮತ್ತು ಪಾರಂಪರಿಕ ಸ್ಮಾರಕಗಳಿಗೆ ನೆಲೆಯಾಗಿರುವ ನಂದಿ ಬೆಟ್ಟ ಟ್ರಕ್ಕಿಂಗ್, ಸೈಕ್ಲಿಂಗ್ ಮತ್ತು ಪ್ಯಾರಾಗ್ಲೈಡಿಂಗ್​ ನಂತಹ ಸಾಹಸ ಕ್ರೀಡೆಗಳಿಗೆ ಪ್ರಸಿದ್ಧಿ ಪಡೆದಿದೆ. ಇಂತಹ ತಾಣ ತಲುಪಲು ರೋಪ್‌ವೇಯ ವೇಗ ಮತ್ತು ಪರಿಸರ ಸ್ನೇಹಿ ಸಾರಿಗೆ ಸೌಲಭ್ಯ, ಅನುಕೂಲ ಕಲ್ಪಿಸುವುದರೊಂದಿಗೆ ತಲುಪುವ ಸಮಯ ಉಳಿಸಲಾಗುತ್ತದೆ. ಪ್ರವಾಸಿಗರಿಗೆ ಸುತ್ತಮುತ್ತಲಿನ ಪ್ರದೇಶದ ಮೈಮಾನಿಕ ಚಿತ್ರಣ ನೀಡುವುದರ ಜೊತೆಗೆ ಈ ಭಾಗದಲ್ಲಿ ಮಾಲಿನ್ಯ ಕಡಿಮೆ ಮಾಡಲು ಸಹಕಾರಿಯಾಗಿದೆ.

ರೋಪ್‌ವೇ ನಿರ್ಮಾಣ ಸುಗಮ ಸಂಪರ್ಕದ ಜತೆಗೆ ನಂದಿ ಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ. ಬೆಟ್ಟದ ಮೇಲಿನ ಮತ್ತು ಕೆಳಗಿನ ಲ್ಯಾಂಡಿಂಗ್ ಸ್ಟೇಷನ್‌ಗಳಲ್ಲಿ ವಿವಿಧ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿಸಲಾಗುತ್ತದೆ. ಬೆಟ್ಟದ ಕೆಳಗಿನ ಟರ್ಮಿನಲ್​ನಲ್ಲಿ- 480 ದ್ವಿಚಕ್ರ, 410 ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಪುಡ್ ಕೋರ್ಟ್, ಕುಡಿಯುವ ನೀರಿನ ಘಟಕಗಳು, ಶೌಚಾಲಯ ವ್ಯವಸ್ಥೆ, ಟಿಕೆಟ್ ಕೌಂಟರ್​ಗಳು, ವಿಶ್ರಾಂತಿ ಕೊಠಡಿಗಳು, ರೆಸ್ಟೋರೆಂಟ್, ಮಳಿಗೆಗಳು ಇರುತ್ತವೆ.

5 ಸಾವಿರ ಜನರಿಗೆ ಉದ್ಯೋಗವಕಾಶ: ಬೆಟ್ಟದ ಮೇಲಿನ ಟರ್ಮಿನಲ್​ನಲ್ಲಿ ಫುಡ್ ಕೋರ್ಟ್, ಕುಡಿಯುವ ನೀರಿನ ಘಟಕಗಳು, ಶೌಚಾಲಯ ವ್ಯವಸ್ಥೆ, ಟಿಕೆಟ್ ಕೌಂಟರ್​ಗಳು, ವಿಶ್ರಾಂತಿ ಕೊಠಡಿಗಳು ನಿರ್ಮಾಣ ಆಗಲಿವೆ. ನಿರ್ಮಿತ ರೋಪ್ ವೇ ಗೆ ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣ ತಲುಪಲು ಅಂದಾಜು 14-15 ನಿಮಿಷಗಳು ಆಗಲಿದೆ. ಪ್ರತಿ ಗಂಟೆಗೆ ಅಂದಾಜು 1000 ಜನರನ್ನು ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣಕ್ಕೆ ಕರೆದೊಯ್ಯಬಹುದು. 50 ಕ್ಯಾಚಿನ್‌ಗಳನ್ನು ಅಳವಡಿಸಲಾಗುತ್ತಿದ್ದು, ಪ್ರತಿ ಕ್ಯಾಚಿನ್ ನಲ್ಲಿ 10 ಪ್ರಯಾಣಿಕರನ್ನು ಕರೆದೊಯ್ಯಬಹುದು. ಈ ಯೋಜನೆಯಿಂದಾಗಿ ನೇರವಾಗಿ 500 ಜನರಿಗೆ, ಪರೋಕ್ಷವಾಗಿ 5000 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿದೆ ಎಂದು ತಿಳಿಸಿದರು.

ಇನ್ನೂ‌ ರೋಪ್​ವೇ ಕಾರ್ಯಕ್ರಮದ ನಂತರ ತಾಲೂಕಿನ ಆರೂರು ಬಳಿ ಇರುವ ನೂತನ‌ ಮೆಡಿಕಲ್ ಕಾಲೇಜು ಉದ್ಘಾಟನೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ಕೊಟ್ಟಿದ್ದು ಕಟ್ಟಡಗಳ ಕಾಮಗಾರಿ‌ ನಡೆಯುತ್ತಿದ್ದರು ಚುನಾವಣೆಯ ಹೊಸ್ತಿಲಲ್ಲಿ ತರಾತುರಿಯಾಗಿ ಉದ್ಘಾಟನೆ ಮಾಡಿ ಲೋಕಾರ್ಪಣೆ ಮಾಡಿದ್ದಾರೆ. ತದ ನಂತರ ನಗರ ಹೊರವಲಯದ ಕೆ.ವಿ ಕ್ಯಾಂಪಸ್ ಮುಂಭಾಗ ಉಚಿತ ನಿವೇಶನಗಳ ಹಂಚಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು 23 ಉಚಿತ ನಿವೇಶನಗಳ ಹಂಚಿಕೆ ಮಾಡಿದ್ದಾರೆ.

ಇನ್ನೂ ಕಳೆದ ಮೂರು ವರ್ಷಗಳ‌ ಹಿಂದೆ ಮೆಡಿಕಲ್‌ ಕಾಲೇಜು ಚಿಕ್ಕಬಳ್ಳಾಪುರದಲ್ಲಿ ಪ್ರಾರಂಭವಾಗುವ ಕನಸು ಇರಲಿಲ್ಲಾ ಆದರೆ ಸುಧಾಕರ್ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಅಭಿವೃದ್ದಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಕನಕಪುರಕ್ಕೆ ಹೋಗ ಬೇಕಾಗಿದ್ದ ಮೆಡಿಕಲ್‌ ಕಾಲೇಜುನ್ನು ಪಟ್ಟು ಬಿಡದೆ ಚಿಕ್ಕಬಳ್ಳಾಪುರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೆ ನನ್ನ ಕ್ಷೇತ್ರಕ್ಕೂ ಮೆಡಿಕಲ್ ಕಾಲೇಜು ಕೊಟ್ಟಿದ್ದಾರೆಂದು ಸಿಎಂ ಸ್ಥಳೀಯ ಶಾಸಕ‌ ಸುಧಾಕರ್​ ಅವರನ್ನು‌ ಕೊಂಡಾಡಿದ್ದಾರೆ.

ಇದನ್ನೂ ಓದಿ: ನಾಳೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ: ಆಸ್ಪತ್ರೆ ಉದ್ಘಾಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.