ETV Bharat / state

ಸೇವಾ ಭದ್ರತೆ ಕೇಳಿದರೆ ಕೆಲಸದಿಂದ ತೆಗೆದು ಹಾಕುವ ಬೆದರಿಕೆ: ಗುತ್ತಿಗೆ ನೌಕರರ ಆರೋಪ

ಹಿರಿಯ ಅಧಿಕಾರಿಗಳ ಮೂಲಕ ಕೆಲಸದಿಂದ ತೆಗೆದುಹಾಕುವ ಬೆದರಿಕೆಗಳು ಸಹ ಬರುತ್ತಿದೆ. ಇದನ್ನೆಲ್ಲ ಗಮನಿಸಿದರೇ ನಮ್ಮ ಬೇಡಿಕೆಗಳು ಈಡೇರುವ ನಂಬಿಕೆ ನಮಗಿಲ್ಲ. ಆದ್ದರಿಂದ ನಮ್ಮ ಬೇಡಿಕೆಗಳು ಈಡೇರುವವರೆಗೂ ನಮ್ಮ ಪ್ರತಿಭಟನೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಸಂಚಾಲಕಿ ವಿ.ಮುನಿರತ್ನಮ್ಮ

Contract Employees Protest in Gudibande
ಗುತ್ತಿಗೆ ನೌಕರರ ಆರೋಪ
author img

By

Published : Oct 2, 2020, 8:59 PM IST

ಗುಡಿಬಂಡೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದೇ ಅಧಿಕಾರಿಗಳ ಮೂಲಕ ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕುತ್ತಿದ್ದಾರೆ ಎಂದು ನೌಕರರು ಆರೋಪಿಸಿದ್ದಾರೆ.

ಗುಡಿಬಂಡೆಯಲ್ಲಿ ಗುತ್ತಿಗೆ ನೌಕರರ ಪ್ರತಿಭಟನೆ

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಸಂಚಾಲಕಿ ವಿ.ಮುನಿರತ್ನಮ್ಮ, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾಯಂಗಾಗಿ ನಮ್ಮ ಹಕ್ಕುಗಳನ್ನು ಕೇಳಲು ಸಹಕರಿಸದೇ ಮಾನಸಿಕವಾಗಿ ಹಿಂಸೆ ನೀಡುವ ಕುತಂತ್ರಗಳನ್ನು ಸರ್ಕಾರಗಳು ಮಾಡುತ್ತಿವೆ. ಇದರಿಂದ ಬೇಸತ್ತು ಈ ಪ್ರತಿಭಟನೆ ಮಾಡಲಾಗುತ್ತಿದೆ. ಈಗಾಗಲೇ ಕೆಲವು ತಿಂಗಳುಗಳ ಹಿಂದೆ ಮನವಿ ಪತ್ರ ಸಲ್ಲಿಸಿದ್ದಾಗ ಸರ್ಕಾರ ಮೂರು ತಿಂಗಳು ಗಡುವು ಕೇಳಿತ್ತು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟೇ ಅಲ್ಲದೆ ಹಿರಿಯ ಅಧಿಕಾರಿಗಳ ಮೂಲಕ ಕೆಲಸದಿಂದ ತೆಗೆದುಹಾಕುವ ಬೆದರಿಕೆಗಳು ಸಹ ಬರುತ್ತಿದೆ. ಇದನ್ನೆಲ್ಲ ಗಮನಿಸಿದರೇ ನಮ್ಮ ಬೇಡಿಕೆಗಳು ಈಡೇರುವ ನಂಬಿಕೆ ನಮಗಿಲ್ಲ. ಆದ್ದರಿಂದ ನಮ್ಮ ಬೇಡಿಕೆಗಳು ಈಡೇರುವವರೆಗೂ ನಮ್ಮ ಪ್ರತಿಭಟನೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.

ನಂತರ ಸಂಘದ ತಾಲೂಕು ಅಧ್ಯಕ್ಷ ಈಶಣ್ಣ ಮಾತನಾಡಿ, ದೇಶದ ಕೆಲವು ರಾಜ್ಯಗಳಲ್ಲಿ ಏಕರೂಪ ವೇತನ ಜಾರಿಗೆ ತಂದಿದ್ದು, ಅದರಂತೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆರೋಗ್ಯ ಇಲಾಖೆಯಲ್ಲಿ ಸುಮಾರು 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ಜೀವದ ಹಂಗನ್ನೂ ತೊರೆದು ರಜಾ ದಿನಗಳಂದು ಕೂಡ ಕೆಲಸ ಮಾಡಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 8 ದಿನಗಳಿಂದ ಮುಷ್ಕರ ನಡೆಸುತ್ತಿದ್ದರೂ ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ಪ್ರತಿ ದಿನ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.