ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿಂದು 95 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2,811ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರ 29, ಬಾಗೇಪಲ್ಲಿ 05, ಚಿಂತಾಮಣಿ 27, ಗೌರಿಬಿದನೂರು 27, ಗುಡಿಬಂಡೆ 03, ಶಿಡ್ಲಘಟ್ಟದಲ್ಲಿ 4 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು 26 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಗೌರಿಬಿದನೂರಿನ 50 ವರ್ಷದ ಪುರುಷ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.