ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಬುಧವಾರ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 131 ಆಗಿದೆ.
ಹೊಸ ಸೋಂಕಿತರನ್ನು ಪಿ -2407, ಪಿ-2408, ಪಿ-2409, ಹಾಗೂ ಪಿ-2410 ಎಂದು ಗುರುತಿಸಲಾಗಿದೆ. ಎರಡು ದಿನಗಳಿಂದ ಯಾವುದೇ ಪ್ರಕರಣಗಳು ಪತ್ತೆಯಾಗದೆ ಇದ್ದಿದ್ದರಿಂದ ಜಿಲ್ಲೆಯ ಜನ ಸ್ವಲ್ಪ ನಿರಾಳರಾಗಿದ್ದರು. ಆದರೆ, ಬುಧವಾರ ಮತ್ತೆ ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದು ಜನರ ಆತಂಕ್ಕೆ ಕಾರಣವಾಗಿದೆ.
ಸೋಂಕಿತರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಇದುವರೆಗೆ ಒಟ್ಟು 19 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.