ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನ ಬ್ಯಾಟರಾಯಸ್ವಾಮಿ ಜಾತ್ರೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಕೊರೊನಾ ವೈರಸ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬ್ಯಾಟರಾಯಸ್ವಾಮಿ ಜಾತ್ರೆ ಬಹಳಷ್ಟು ಇತಿಹಾಸ ಪ್ರಸಿದ್ದವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥೋತ್ಸವದಲ್ಲಿ ಭಾಗಿಯಾಗುತ್ತಾರೆ. ಸಾರ್ವಜನಿಕರಿಗೆ ಕೆ ಮುತ್ತುಕದಹಳ್ಳಿ ಆರೋಗ್ಯ ಇಲಾಖೆ ವತಿಯಿಂದ ಜಾತ್ರೆಯಲ್ಲಿ ಕ್ಯಾಂಪ್ ಆಯೋಜಿಸಿ ಪ್ರಪಂಚ ವ್ಯಾಪ್ತಿ ಭಯ ಹುಟ್ಟಿಸುತ್ತಿರುವ ಕೊರೊನಾ ವೈರಸ್ ಹರಡದಂತೆ ತಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಸ್ವಚ್ಛತೆ,ಶುಭ್ರತೆ ಸೇರಿ ಆರೋಗ್ಯದಲ್ಲಿ ಏರುಪೇರು ಉಂಟಾದ ಸಂದರ್ಭದಲ್ಲಿ ಸಮೀಪದ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಜಾತ್ರೆಯಲ್ಲೂ ಕೊರೊನಾ ವೈರಸ್ ಬಗ್ಗೆ ಮಾಹಿತಿ ತಿಳಿಸುತ್ತಿರುವುದಕ್ಕೆ ಜಾತ್ರೆಗೆ ಬಂದ ಭಕ್ತರು ಪ್ರಶಂಸೆ ವ್ಯಕ್ತಪಡಿಸಿದರು.