ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 141 ಮಂದಿಯಲ್ಲಿ ಕೊರೊನಾ ಪತ್ತೆಯಾಗಿದ್ದು, 198 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದಾರೆ.
ಚಿಕ್ಕಬಳ್ಳಾಪುರ 37, ಬಾಗೇಪಲ್ಲಿ 25, ಚಿಂತಾಮಣಿ 27, ಗೌರಿಬಿದನೂರು 16, ಗುಡಿಬಂಡೆ 16, ಶಿಡ್ಲಘಟ್ಟದಲ್ಲಿ 20 ಸೋಂಕಿತರು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,712 ಕ್ಕೆ ಏರಿಕೆಯಾಗಿದೆ.
ಇನ್ನು ಚಿಕ್ಕಬಳ್ಳಾಪುರ 95, ಬಾಗೇಪಲ್ಲಿ 21, ಚಿಂತಾಮಣಿ 26, ಗೌರಿಬಿದನೂರು 43, ಗುಡಿಬಂಡೆ 3, ಶಿಡ್ಲಘಟ್ಟದಲ್ಲಿ 10 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಗೊಂಡಿದ್ದು ಜಿಲ್ಲೆಯಲ್ಲಿ ಒಟ್ಟು ಗುಣಮುಖಗೊಂಡವರ ಸಂಖ್ಯೆ 7,439 ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೂ ಚಿಕಿತ್ಸೆ ಫಲಕಾರಿಯಾಗದೆ 93 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.