ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಇಂದು 15 ಜನರಿಗೆ ಕೊರೊನಾ ವಕ್ಕರಿಸಿದ್ದು ಬಹುತೇಕ ಮಂದಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸೋಂಕಿತರ ಸಂಪರ್ಕದಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರ ವರದಿ ಪಾಸಿಟಿವ್ ಬಂದಿದೆ. ಗೌರಿಬಿದನೂರಿನಲ್ಲಿ ಮತ್ತೆ ಕೊರೊನಾ ಸ್ಪೋಟಗೊಂಡಿದ್ದು 10 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2 ಪ್ರಕರಣಗಳು ಮಹಾರಾಷ್ಟ್ರದ ನಂಟನ್ನು ಹಾಗೂ ಓರ್ವ ಬೆಂಗಳೂರಿಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ.
ಚಿಂತಾಮಣಿಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಮೂವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಹಿನ್ನೆಲೆ ಹೊಂದಿದ್ದಾರೆ. ಪಿ-8504 ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಒಟ್ಟಾರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 201 ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 37 ಸಕ್ರಿಯ ಪ್ರಕರಣಗಳಿವೆ.