ETV Bharat / state

ಚಿಕ್ಕಬಳ್ಳಾಪುರ: ಮಕ್ಕಳಾಗಿಲ್ಲವೆಂಬ ಕೊರಗು, ಆತ್ಮಹತ್ಯೆಗೆ ಶರಣಾದ ದಂಪತಿ

ಮಕ್ಕಳಾಗಲಿಲ್ಲ ಎಂದು ಬೇಸರಗೊಂಡ ಗಂಡ, ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

couple-committed-suicide-in-chikkaballapur
ಚಿಕ್ಕಬಳ್ಳಾಪುರ: ಮಕ್ಕಳಾಗಿಲ್ಲವೆಂದು ನೊಂದ ದಂಪತಿ ಆತ್ಮಹತ್ಯೆ
author img

By

Published : Sep 18, 2022, 9:02 AM IST

ಚಿಕ್ಕಬಳ್ಳಾಪುರ: ಮದುವೆಯಾಗಿ ನಾಲ್ಕು ವರ್ಷ ಕಳೆದರೂ ಮಕ್ಕಳಾಗಲಿಲ್ಲ ಎಂದು ಮನನೊಂದಿದ್ದ ದಂಪತಿ ಒಂದೇ ಸೀರೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಸೂಲಾಕುಂಟೆಯಲ್ಲಿ ಶನಿವಾರ ನಡೆದಿದೆ. ಆಟೋ ಚಾಲಕನಾಗಿದ್ದ ಚಂದ್ರಶೇಖರ್ (32) ಹಾಗೂ ಶಶಿಕಲಾ (24) ಮೃತರು.

ಇವರಿಬ್ಬರೂ ಮದುವೆಯಾಗಿ ನಾಲ್ಕು ವರ್ಷದಿಂದ ಅನ್ಯೋನ್ಯತೆಯಿಂದ ಬದುಕುತ್ತಿದ್ದರು. ಆದರೆ ಮಕ್ಕಳಾಗಲಿಲ್ಲ ಅಂತ ನೊಂದಿದ್ದರಲ್ಲದೆ, ದೇವಸ್ಥಾನಗಳಲ್ಲಿ ಪೂಜೆ, ಹೋಮಗಳನ್ನು ಮಾಡಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಅರಸೀಕೆರೆಯಲ್ಲಿ ಅಕ್ಕನನ್ನು ಕೊಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ತಮ್ಮ

ಶನಿವಾರ ಸಂಜೆಯಾದರೂ ಗಂಡ, ಹೆಂಡತಿ ಮನೆಯಿಂದ ಹೊರಗಡೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಪಕ್ಕದ ಮನೆಯವರು ಕಿಟಕಿಯಿಂದ ಇಣುಕಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುಟಾಣಿ ಮಗುವಿನೊಂದಿಗೆ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಂಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.