ETV Bharat / state

ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ: ದಂಪತಿ ಸಾವು - etv bharat kannada

ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿರುವ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.

couple-died-in-road-accident-at-chintamani
ಚಿಕ್ಕಬಳ್ಳಾಪುರ: ರಸ್ತೆ ಅಪಘಾತ, ದಂಪತಿ ಸಾವು
author img

By ETV Bharat Karnataka Team

Published : Dec 13, 2023, 4:32 PM IST

ಚಿಕ್ಕಬಳ್ಳಾಪುರ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ನಾಯಿಂದ್ರಹಳ್ಳಿ ಬಳಿ ನಡೆದಿದೆ. ಮೃತರನ್ನು ಕೋಲಾರ ತಾಲೂಕಿನ ಚನ್ನಸಂದ್ರ ಗ್ರಾಮದ ನಿವಾಸಿಗಳಾದ ಸುಬ್ರಮಣಿ (55 ), ಗಾಯಿತ್ರಮ್ಮ (50) ಎಂದು ಗುರುತಿಸಲಾಗಿದೆ.

ದಂಪತಿ ತಮ್ಮ ದ್ವಿಚಕ್ರ ವಾಹನದಲ್ಲಿ ನಾಯಿಂದ್ರಹಳ್ಳಿ ಗ್ರಾಮದಲ್ಲಿನ ತಿಥಿ ಕಾರ್ಯಕ್ರಮಕ್ಕೆ ಹೊರಟಿದ್ದರು. ಈ ವೇಳೆ, ಅತೀ ವೇಗವಾಗಿ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾದೇ ಅವರು ಸಾವನ್ನಪ್ಪಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಜಯಪುರ: ಚಿಕಿತ್ಸೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ಅಪಘಾತ; ಶಿಶು ಸಹಿತ ಗರ್ಭಿಣಿ ಸಾವು

ಮಿನಿ ಬಸ್​ಗೆ ಕಾರು ಡಿಕ್ಕಿ, ಇಬ್ಬರು ಸಾವು(ರಾಮನಗರ): ಮಿನಿ ಬಸ್​ಗೆ ಕಾರು ಡಿಕ್ಕಿಯಾದ ಪರಿಣಾಮ ಯುವಕ ಹಾಗೂ ಯುವತಿ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ನಡೆದಿತ್ತು. ದೀಪಕ್(25),ಶೈಲ(22) ಮೃತರು. ಇವರು ಕನಕಪುರದಿಂದ ಸ್ವಗ್ರಾಮ ಕೆಬ್ಬಹಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿತ್ತು. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು.

ಡಿವೈಡರ್​​ಗೆ ಕಾರು ಡಿಕ್ಕಿ, ಐವರಿಗೆ ಗಾಯ(ಚನ್ನಪಟ್ಟಣ): ಟೈಯರ್ ಸ್ಫೋಟಗೊಂಡ ಕಾರೊಂದು ಡಿವೈಡರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ ನಡೆದಿತ್ತು. ಕಾರಿನಲ್ಲಿ ಚಾಲಕ ಸೇರಿ ಐವರು ಪ್ರಯಾಣಿಕರು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ, ತಾಲೂಕಿನ ಬೈರಾಪಟ್ಟಣ ಬಳಿ ಬರುತ್ತಿದ್ದಂತೆ ಏಕಾಏಕಿ ಕಾರಿನ ಟೈಯರ್ ಸ್ಫೋಟಗೊಂಡಿತ್ತು. ಪರಿಣಾಮ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.