ETV Bharat / state

ಕೋವಿಡ್​​ ಲಸಿಕಾ ಅಭಿಯಾನ: ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ - chikkaballapur latest update news

ಜೂ.21ರಂದು ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನದಲ್ಲಿ 42,576 ಡೋಸ್ ಲಸಿಕೆ ನೀಡಿ ಶೇ.4 ರಷ್ಟು ಗುರಿ ಸಾಧಿಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ.

chikkaballapur
ಕೋವಿಡ್​​ ಲಸಿಕಾ ಅಭಿಯಾನ
author img

By

Published : Jun 23, 2021, 9:01 AM IST

ಚಿಕ್ಕಬಳ್ಳಾಪುರ: ವಿಶ್ವ ಯೋಗ ದಿನದ ಅಂಗವಾಗಿ ಜೂ.21ರಂದು ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನದಲ್ಲಿ 30 ರಿಂದ 35 ಸಾವಿರ ಲಸಿಕೆ ಹಾಕಲು ಗುರಿ ನಿಗದಿಪಡಿಸಿಕೊಳ್ಳಲಾಗಿತ್ತು. ಆ ಗುರಿಯನ್ನು ಮೀರಿ ಲಸಿಕೆ ನೀಡುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ 3,95,000 ಡೋಸ್ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ. ಈ ಪೈಕಿ ಮೊದಲ ಡೋಸ್ ಲಸಿಕೆಯನ್ನು 3,30,588 ಜನರಿಗೆ ನೀಡಲಾಗಿದ್ದು, 64,412 ಜನರು 2ನೇ ಡೋಸ್ ಲಸಿಕೆ ಪಡೆದಿದ್ದಾರೆ. ಲಸಿಕಾ ಅಭಿಯಾನ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಎಲ್ಲರೂ ಎರಡೂ ಡೋಸ್ ಲಸಿಕೆ ಪಡೆಯುವವರೆಗೆ ಅಭಿಯಾನ ಮುಂದುವರೆಯಬೇಕು. ಈ ಹಿನ್ನೆಲೆಯಲ್ಲಿ 57 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟು 69 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯ ಮುಂದುವರಿಯಲಿದೆ. ಇದರ ಸದುಪಯೋಗವನ್ನ ಎಲ್ಲರೂ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ನಿರೀಕ್ಷೆಗೂ ಮೀರಿದ ಸಾಧನೆ:

ಪ್ರಧಾನಿಯವರ ಕರೆಯ ಮೇರೆಗೆ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸೋಮವಾರ 232 ಲಸಿಕಾ ಕೇಂದ್ರಗಳಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನದಲ್ಲಿ 42, 576 ಜನರಿಗೆ ಲಸಿಕೆ ಹಾಕುವ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಲಸಿಕಾಕರಣ ಮಾಡಿ ಜಿಲ್ಲೆಯ ಮಟ್ಟಿಗೆ ಈ ಹಿಂದಿನ ಎಲ್ಲಾ ದಾಖಲೆಯನ್ನು ಮೀರಿ ಉತ್ತಮ ಸಾಧನೆಗೈದಿದ್ದಾರೆ.

ಜಿಲ್ಲೆಯಲ್ಲಿ ಲಸಿಕೆ ನೀಡಲು 18 ವರ್ಷ ಮೇಲ್ಪಟ್ಟ 9,63,038 ಜನರನ್ನು ಗುರುತಿಸಲಾಗಿದೆ. ಈ ಪೈಕಿ ಯೋಗ ದಿನದ ಪ್ರಯುಕ್ತ ನಡೆದ ಲಸಿಕಾ ಅಭಿಯಾನದಲ್ಲಿ ನಿರೀಕ್ಷೆಗೂ ಮೀರಿ 42,576 ಡೋಸ್ ಲಸಿಕೆ ನೀಡಿ ಶೇ.4 ರಷ್ಟು ಗುರಿ ಸಾಧಿಸುವ ಮೂಲಕ ಜಿಲ್ಲೆ ರಾಜ್ಯದಲ್ಲಿಯೇ ಮೊದಲನೆಯ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.