ETV Bharat / state

ಗೋ ಹತ್ಯೆ ಮಹಾಪಾಪ,ಇದರ ನಿಷೇಧಕ್ಕೆ ಸಿಎಂಗೆ ಮನವಿ ಮಾಡುವೆ: ಸಚಿವ ಸುಧಾಕರ್ - Minister Dr.K. Sudhakar

ಗೋ ಹತ್ಯೆ ಮಹಾಪಾಪ, ಇದನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಜೊತೆಗೆ ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
author img

By

Published : Aug 30, 2020, 10:37 PM IST

ಚಿಕ್ಕಬಳ್ಳಾಪುರ: ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋ ಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ ಎಂದರು.

ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು. ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆಯಾಗಬೇಕಿದೆ. ನಮ್ಮ ಪಕ್ಷ ಈ ವಿಚಾರದಲ್ಲಿ ದೃಢ ಸಂಕಲ್ಪ ಹೊಂದಿದೆ. ಶೀಘ್ರದಲ್ಲೇ ರಫ್ತು ನಿಷೇಧ ಆಗಲಿದೆ ಎಂದರು.

ಡ್ರಗ್ಸ್ ಮಾಫಿಯಾ ಬೆಂಗಳೂರಿನಲ್ಲಿ ವ್ಯಾಪಕವಾಗುತ್ತಿರುವುದು ಆತಂಕಕಾರಿ. ಇದು ಸಮಾಜಕ್ಕೆ ಮಾರಕವಾಗಿದ್ದು, ಆರಂಭದಲ್ಲೇ ಕಿತ್ತು ಹಾಕಬೇಕು. ಇಲ್ಲವಾದರೆ ಇದು ಅಪಾಯಕಾರಿಯಾಗಲಿದೆ. ಪೊಲೀಸರು ಮಾಫಿಯಾವನ್ನು ಸಮಾಜದಿಂದ ತೆಗೆದುಹಾಕಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.