ETV Bharat / state

ಚಿಕ್ಕಬಳ್ಳಾಪುರ: 8 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ

ಮಗಳನ್ನು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

Young woman committed suicide
ಎಂಟು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ
author img

By

Published : Jun 23, 2023, 7:34 PM IST

Updated : Jun 23, 2023, 9:38 PM IST

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ತೇಜಸ್ವಿನಿ (28) ಎಂದು ಗುರುತಿಸಲಾಗಿದೆ. ಇವರು ಚಿಕ್ಕಬಳ್ಳಾಪುರ ಕಾರ್ಖಾನೆ ಪೇಟೆಯಲ್ಲಿರುವ ಪತಿ ಲೋಹಿತ್ ಜೊತೆ ವಾಸವಾಗಿದ್ದರು. ದೇವನಹಳ್ಳಿ ತಾಲೂಕಿನ ವಿಜಯಪುರ ಮೂಲದ ತೇಜಸ್ವಿನಿ 2022ರಲ್ಲಿ ವಿವಾಹವಾಗಿದ್ದರು.

ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ತೇಜಸ್ವಿ ಪೋಷಕರು ವರದಕ್ಷಿಣ ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಮಿನಾಶಕ ಸೇವಿಸಿ ಖಾಸಗಿ ಶಾಲಾ ಶಿಕ್ಷಕ ಆತ್ಮಹತ್ಯೆ: ಕ್ಷುಲ್ಲಕ ಕಾರಣಕ್ಕೆ ಕ್ರಿಮಿನಾಶಕ ಸೇವಿಸಿ ಖಾಸಗಿ ಶಾಲೆಯ ಶಿಕ್ಷಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಇಂದು ಜರುಗಿದೆ‌. ರಾಜು ಬ್ಯಾಡಗಿ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಷ್ಟಗಿ ಪಟ್ಟಣದಲ್ಲಿರುವ ಬುತ್ತಿ ಬಸವೇಶ್ವರ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

ಇವರು ಕಂಪನಿಯೊಂದರಲ್ಲಿ ಹಣ ಡಬಲ್ ಮಾಡಿಸಿಕೊಡುವುದಾಗಿ ಅನೇಕ ಜನರಿಂದ ಹಣ ಹೂಡಿಕೆ ಮಾಡಿಸಿದ್ದರು. ಹಣ ಹೂಡಿಕೆ ಮಾಡಿದವರು ವಾಪಸ್ ಹಣ ಕೊಡಿಸುವಂತೆ ಕೇಳುತ್ತಿದ್ದರು. ಕುಷ್ಟಗಿಯ ಸಾಯಿಬಾಬಾ ದೇವಸ್ಥಾನ ಹಿಂಭಾಗದಲ್ಲಿ ತನ್ನ‌ ಕೆಲವು ಮಿತ್ರರಿಗೆ ಲೈವ್ ವಿಡಿಯೋ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಬೆಳಗಾವಿ ಯುವಕ: ಅನಾರೋಗ್ಯದಿಂದ ಮನನೊಂದು ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಣೇಶಪುರದ ದುರ್ಗಾ ಕಾಲೋನಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಇಲ್ಲಿನ ನಿವಾಸಿ ಪ್ರತೀಕ್ ಪ್ರಕಾಶ ಶಿರೋಳ್ಕರ್ ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಎಂಜಿನಿಯರ್‌ ಆಗಿದ್ದ ಪ್ರತೀಕ್‌ ಎರಡು ವರ್ಷಗಳ ಹಿಂದೆ ಅಪಘಾತಕ್ಕೀಡಾಗಿದ್ದರು. ಆಗಾಗ ಕಾಡುತ್ತಿದ್ದ ಅನಾರೋಗ್ಯದಿಂದ ಮನನೊಂದಿದ್ದರು. ನಿನ್ನೆ ರಾತ್ರಿ ಮನೆಯ ಎಲ್ಲರೊಂದಿಗೆ ಊಟ ಮಾಡಿ, ಜ್ಯೂಸ್ ಕುಡಿದು ಮೇಲ್ಮಹಡಿಯ ರೂಮಿಗೆ ಹೋಗಿ ಮನೆಯವರೆಲ್ಲಾ ಮಲಗಿದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪ್ರತೀಕ್​ ವಿವಾಹವಾಗಿತ್ತು. ಕ್ಯಾಂಪ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Women Sucide: ಬೆಂಗಳೂರಿನಲ್ಲಿ ಲಖನೌ ಮೂಲದ ಮಹಿಳೆ ಮನನೊಂದು ಆತ್ಮಹತ್ಯೆ

Last Updated : Jun 23, 2023, 9:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.