ETV Bharat / state

ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ - ಈಟಿವಿ ಭಾರತ ಕನ್ನಡ

Chikkaballapura crime: ನಾರಾಯಣಸ್ವಾಮಿ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ.

crime youth murdered in chikkaballapura
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
author img

By ETV Bharat Karnataka Team

Published : Aug 25, 2023, 1:15 PM IST

Updated : Aug 25, 2023, 7:49 PM IST

ಚಿಕ್ಕಬಳ್ಳಾಪುರ: ರಿಯಲ್​ ಎಸ್ಟೇಟ್​ ಹಾಗೂ ರಾಜಕೀಯದಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಬೈರಗಾನಗಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬವರು ಕೊಲೆಯಾದ ವ್ಯಕ್ತಿ. ರಾಜಕೀಯದಲ್ಲಿ ಗುರುಸಿಕೊಂಡಿದ್ದ ನಾರಾಯಣಸ್ವಾಮಿ ದಲಿತ ಸಂಘಟನೆಯ ಮುಖಂಡರು ಆಗಿದ್ದರು.

ವಿವರ: ಗುರುವಾರ ಸಂಜೆ ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ನಾರಾಯಣಸ್ವಾಮಿ ಚಲಿಸುತ್ತಿದ್ದ ಓಮಿನಿ ರಸ್ತೆ ಬದಿ ನಿಂತಿದೆ. ಕಾರು ನಿಲ್ಲಿಸಿದ ಸ್ಥಳದಿಂದ ಸ್ವಲ್ಪ ದೂರದಲ್ಲಿ ನಾರಾಯಣಸ್ವಾಮಿಯ ಕೊಲೆಯಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಡಿ.ಎಲ್.ನಾಗೇಶ್ ಹಾಗೂ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಅವರನ್ನು ಸಂಚು ರೂಪಿಸಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕುಡುಕ ಮಗನ ಹತ್ಯೆಗೆ ತಂದೆಯಿಂದ ಸುಪಾರಿ: ಆರೋಪಿಗಳು ಸೆರೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿನ್ನೆ (ಗುರುವಾರ) ಯುವತಿಯೋರ್ವಳನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ವರದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ (18) ಕೊಲೆಗೀಡಾದ ಯುವತಿ. ಕೃತ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು, ಈತನನ್ನು ಪದ್ಮರಾಜ್​ ಎಂದು ಗುರುತಿಸಲಾಗಿದೆ.

ಘಟನೆಯ ಹಿನ್ನೆಲೆ: ಗೌರಿ ಪುತ್ತೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಪದ್ಮರಾಜ್​ ಮತ್ತು ಗೌರಿ ಪರಿಚಯದವರಾಗಿದ್ದರು. ಅಲ್ಲದೇ ಈ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಸಂಬಂಧ ವಿಟ್ಲಾ ಪೊಲೀಸ್​ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಇಂದು ಪುತ್ತೂರು ಬಸ್ ನಿಲ್ದಾಣದಲ್ಲಿ ಇಬ್ಬರ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಪದ್ಮರಾಜ್​ ಮಹಿಳಾ ಪೊಲೀಸ್ ಠಾಣೆ ಬಳಿ ಹೋಗುತ್ತಿದ್ದ ಗೌರಿಗೆ ಬೈಕ್​ನಲ್ಲಿ ಬಂದು ಕುತ್ತಿಗೆಗೆ ಚೂರಿಯಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದನು.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗೌರಿಯನ್ನು ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಆಕೆ ಕೊನೆಯುಸಿರೆಳೆದಿದ್ದಾಳೆ. ವಿಷಯ ತಿಳಿದ ಪೊಲೀಸರು ಆರೋಪಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಪದ್ಮರಾಜ್​ನನ್ನು ಪತ್ತೆ ಹಚ್ಚಿ ನಿನ್ನೆಯೇ ಬಂಧಿಸಿದ್ದಾರೆ. ಜತೆಗೆ ಕೃತ್ಯಕ್ಕೆ ಬಳಸಿದ್ದ ಚೂರಿ ಮತ್ತು ಬೈಕ್​ ಅನ್ನು ಸಹ ವಶಕ್ಕೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗಂಡು ಮಗುವಾಗದ ಕೊರಗು, ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದ ತಾಯಿ; ಮೂವರು ಮಕ್ಕಳು ಸಾವು

Last Updated : Aug 25, 2023, 7:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.