ಚಿಕ್ಕಬಳ್ಳಾಪುರ: ಮಗಳು ಪ್ರಿಯಕರನೊಂದಿಗೆ ನಾಪತ್ತೆಯಾದ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ, ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಪ್ರಿಯಕರನೊಂದಿಗೆ ಮಗಳು ಅರ್ಚನಾ ನಾಪತ್ತೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ತಂದೆ-ತಾಯಿ ಮತ್ತು ಮಗ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀರಾಮಪ್ಪ (65), ಸರೋಜಮ್ಮ (60) ಮಗ ಮನೋಜ್ (24) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.