ಚಿಕ್ಕಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ಘಟನೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಚಂದಂದೂರು ಗ್ರಾಮದ ನಾಗರಾಜ್(40) ಎಂದು ತಿಳಿದು ಬಂದಿದೆ. ಮುಖ್ಯ ರಸ್ತೆಯ ಖಾಸಗಿ ಜಮೀನೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸಾವಿನ ಹಿಂದೆ ಹಲವು ಸಂಶಯಗಳು ಇವೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದಾರೆ. ಕಳೆದ ರಾತ್ರಿ ಮನೆಯಿಂದ ಹೊರಗೆ ಹೋದ ವ್ಯಕ್ತಿ ಮರಳಿ ಮನೆಗೆ ಹಿಂತಿರುಗದೇ ಇದ್ದುದರಿಂದ ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ.
ಈ ವೇಳೆ, ಬೆಳಗಿನ ಜಾವ ಕುರಿ ಮೇಯಿಸಲು ಹೋದವರು ಮೃತ ದೇಹವನ್ನು ಕಂಡು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತ ವ್ಯಕ್ತಿಯ ಪಕ್ಕದಲ್ಲಿ ಮದ್ಯದ ಬಾಟಲಿ ಇದ್ದ ಹಿನ್ನೆಲೆ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ಕುರಿತು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಇಬ್ಬರು ಮಕ್ಕಳೊಂದಿಗೆ ಪತ್ನಿ ಜನ್ಮದಿನ ಆಚರಿಸಿ ಕೊಲೆ ಮಾಡಿದ ಗಂಡ.. ಆತ್ಮಹತ್ಯೆಗೆ ಶರಣಾದ ವ್ಯಕ್ತಿ!