ಗೌರಿಬಿದನೂರು (ಚಿಕ್ಕಬಳ್ಳಾಪುರ): ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಮಹಾರಾಷ್ಟ್ರ ಮತ್ತು ಬಿಹಾರ ಮೂಲದ 10 ಕಾರ್ಮಿಕರಿಗೆ ಕೊರೊನಾ ಸೋಂಕು ಧೃಡಪಟ್ಟಿರುವುದರಿಂದ ಕಾರ್ಖಾನೆಯನ್ನು ಮುಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಹೊರರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ನೂರಾರು ಲಾರಿಗಳು ಹೋಗಿ ಬರುತ್ತಿವೆ. ಲಾರಿ ಚಾಲಕರು ಮತ್ತು ಸಹಾಯಕರು ತೊಂಡೇಬಾವಿಯ ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಜನತೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಕನಿಷ್ಠ ಒಂದು ತಿಂಗಳು ಕಾಲ ಕಾರ್ಖಾನೆಯನ್ನು ಸ್ಥಗಿತಗೊಳಿಸಬೇಕು ಎಂದು ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಸ್ಥಳೀಯರು ಮನವಿ ಮಾಡಿದ್ದಾರೆ. ಕಾರ್ಖಾನೆ ಮುಚ್ಚದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.