ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಕೇಂದ್ರ ವಲಯ ಐಜಿಪಿ ಶರತ್ಚಂದ್ರ, ಗೌರಿಬಿದನೂರು ನಗರಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಗೌರಿಬಿದನೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.