ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ನಗರದ ವಾರ್ಡ್ ನಂಬರ್ 4ರಲ್ಲಿ ಮ್ಯಾನ್‌ಹೋಲ್ ತುಂಬಿ ಕೊಳಚೆ ನೀರು ಹೊರ ಬರುತ್ತಿದ್ದು, ಸೊಳ್ಳೆಗಳ ಕಾಟದಿಂದ ಅಲ್ಲಿನ ಜನರು ಕಂಗೆಟ್ಟಿದ್ದಾರೆ.
ಜಿಲ್ಲೆಯ ಚಿಂತಾಮಣಿ ನಗರದ ವಾರ್ಡ್ ನಂಬರ್ 4ರ ಎಲೆ ವೆಂಕಟರವಣಪ್ಪ ರಸ್ತೆಯಲ್ಲಿ ಕಳೆದ ಒಂದು ತಿಂಗಳಿನಿಂದ ಮ್ಯಾನ್‌ಹೋಲ್ ತುಂಬಿ ಕೊಳಚೆ ನೀರು ಮನೆಗಳ ಮುಂದೆ ಬರುತ್ತಿದೆ. ಇದರಿಂದ ಆ ಭಾಗದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸುತ್ತಮುತ್ತಲಿನ ಜನರು ಪರದಾಡುತ್ತಿದ್ದಾರೆ.
ಹಲವು ಬಾರಿ ಈ ಕುರಿತು ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಸ್ವಚ್ಛತೆ ಕಾರ್ಯಕ್ಕೆ ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದು, ಕೂಡಲೇ ನಗರಸಭೆ ಅಧಿಕಾರಿಗಳು ಮ್ಯಾನ್‌ಹೋಲ್ ಸ್ವಚ್ಛಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.