ETV Bharat / state

ಕೋವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಸಚಿವ ಡಾ. ಕೆ. ಸುಧಾಕರ್

ತಮ್ಮ ಕ್ಷೇತ್ರದಲ್ಲಿ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಮನೆಗಳಿಗೆ ತೆರಳಿ 1 ಲಕ್ಷ ರೂ. ಪರಿಹಾರವನ್ನು ಶ್ರೀಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುತ್ತದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

dr k sudhakar
ಸಚಿವ ಡಾ.ಕೆ. ಸುಧಾಕರ್
author img

By

Published : Jun 13, 2021, 6:55 PM IST

Updated : Jun 13, 2021, 7:02 PM IST

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಾವು ಪ್ರತಿನಿಧಿಸುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ, ಕೋವಿಡ್ ಸೋಂಕಿಗೊಳಗಾಗಿ ಮೃತಮಟ್ಟವರ ಕುಟುಂಬಕ್ಕೆ ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

ಇಂದು ಕ್ಷೇತ್ರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಮನೆಗೆ ತೆರೆಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಬಳಿಕ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ತಮ್ಮ ಕ್ಷೇತ್ರದಲ್ಲಿ ಮಹಾಮಾರಿ‌ ಕೊರೊನಾ‌ ಸೋಂಕಿನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ 1 ಲಕ್ಷ ರೂ. ಪರಿಹಾರವನ್ನು ಶ್ರೀ ಸಾಯಿ ಕೃಷ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದಲ್ಲಿ ಸಚಿವರು ತಮ್ಮದೇ ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ಅದೇ ರೀತಿ ನಾನು ಕೂಡ ಮಾಡುತ್ತಿರುವೆ. ಕೋವಿಡ್ ಮೊದಲನೇ ಅಲೆಯಲ್ಲಿ ಕ್ಷೇತ್ರದಾದ್ಯಂತ ಸುಮಾರು 80 ಸಾವಿರಕ್ಕೂ ಅಧಿಕ ದಿನಸಿ ಕಿಟ್‌ಗಳನ್ನು ಕೊಡಲಾಗಿದೆ. ‌ಈ ಬಾರಿಯೂ ಅದೇ ರೀತಿ ಹಂಚಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ನಾಳೆ ಲಾಕ್​ಡೌನ್​ ತೆರವು : ಬೆಂಗಳೂರಿನತ್ತ ಮುಖಮಾಡಿದ ನೆರೆ ರಾಜ್ಯದವರು

Last Updated : Jun 13, 2021, 7:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.