(ಚಿಕ್ಕಬಳ್ಳಾಪುರ)ಬಾಗೇಪಲ್ಲಿ: ನಿಯಂತ್ರಣ ತಪ್ಪಿದ ಆಟೋ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಮಾರ್ಗಾನುಕುಂಟೆ ಗ್ರಾಮದ ಸೋಮಶೇಖರ್(30) ಮೃತ ಚಾಲಕ. ಸೋಮಶೇಖರ್ ಪ್ರತಿ ದಿನ ಮಾರ್ಗಾನುಕುಂಟೆ ಗ್ರಾಮದಿಂದ ಬಾಗೇಪಲ್ಲಿಗೆ ಪ್ರಯಾಣಿಕರನ್ನು ಕರೆ ತರುತ್ತಿದ್ದ ಎನ್ನಲಾಗಿದೆ. ಎಂದಿನಂತೆ ಇಂದು ಸಹ ಪ್ರಯಾಣಿಕರನ್ನು ಕರೆ ತರುತ್ತಿದ್ದಾಗ ಈ ಘಟನೆ ನಡೆದಿದೆ.
ಆಟೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪಟ್ಟಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.