ETV Bharat / state

ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಭರವಸೆ : ಸಚಿವ ಬಿ ಸಿ ನಾಗೇಶ್ - Agalagurki BGS School

ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಯಾವುದೇ ರೀತಿಯ ತೊಡಕಾಗದಂತೆ ಕ್ರಮ ಕೈಗೊಂಡಿದ್ದೇವೆ. ಶಿಕ್ಷಣ ಇಲಾಖೆಯಲ್ಲಿ ವ್ಯವಸ್ಥೆಗಳನ್ನು ಸುಧಾರಿಸುವ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಟಿಇಟಿ ಮತ್ತು ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಿ ಅನುಕೂಲ ಕಲ್ಪಿಸಲಾಗುವುದು..

education-minister-b-c-nagesh
ಸಚಿವ ಬಿ. ಸಿ ನಾಗೇಶ್
author img

By

Published : Sep 15, 2021, 7:44 PM IST

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ 5 ಸಾವಿರ ಶಿಕ್ಷಕರನ್ನು ಟಿಇಟಿ ಮತ್ತು ಸಿಇಟಿ ಮೂಲಕ ನೇಮಕ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆಯಾಗಲಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಭರವಸೆ ನೀಡಿದರು.

ಅಗಲಗುರ್ಕಿಯ ಬಿಜಿಎಸ್ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆಯಿದೆ. ಅದನ್ನು ನೀಗಿಸುವ ಸಲುವಾಗಿ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು 10 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಪ್ರಕ್ರಿಯೆ ನಡೆಸಿದರು.

ಅದರಲ್ಲಿ 3000 ಶಿಕ್ಷಕರು ಅರ್ಹತೆ ಪಡೆದುಕೊಂಡಿದ್ದರು. ಆದರೆ, ಕೊರೊನಾ ಸೋಂಕಿನ ಪ್ರಭಾವದಿಂದ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಪ್ರಸಕ್ತ ಸಾಲಿನಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಯಾವುದೇ ರೀತಿಯ ತೊಡಕಾಗದಂತೆ ಕ್ರಮ ಕೈಗೊಂಡಿದ್ದೇವೆ. ಶಿಕ್ಷಣ ಇಲಾಖೆಯಲ್ಲಿ ವ್ಯವಸ್ಥೆಗಳನ್ನು ಸುಧಾರಿಸುವ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಟಿಇಟಿ ಮತ್ತು ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಿ ಅನುಕೂಲ ಕಲ್ಪಿಸಲಾಗುವುದೆಂದು ತಿಳಿಸಿದರು.

ದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೊಳಿಸುತ್ತಿಲ್ಲ. 2014 ರಿಂದ 2020 ರವರೆಗೆ ಸಾರ್ವತ್ರಿಕವಾಗಿ ಚರ್ಚೆಗಳನ್ನು ನಡೆಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಂಡ ನಂತರ ಅನುಷ್ಠಾನಗೊಳಿಸಲು ಕ್ರಮಕೈಗೊಂಡಿದ್ದೇವೆ. ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ಮುನ್ನ ಚರ್ಚೆಗಳನ್ನು ಆಯೋಜಿಸಿ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೇವೆ ಎಂದರು.

ಹಿಂದಿ ಭಾಷೆ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದೇಶದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಮಹಾತ್ಮ ಗಾಂದೀಜಿಯವರು ಮತ್ತು ಶಿಕ್ಷಣ ತಜ್ಞರು ಸ್ವದೇಶಿ ಸ್ವಾವಲಂಬಿ ಶಿಕ್ಷಣ ನೀಡಬೇಕೆಂದು ಹೇಳಿದರು. ಎಲ್ಲರಿಗೂ ಶಿಕ್ಷಣ, ಬುದ್ದಿಗೆ ಶಿಕ್ಷಣ ಕೊಡಬೇಕು. ಹೃದಯಕ್ಕೆ ಶಿಕ್ಷಣ ಕೊಡಬೇಕು ಎಂಬ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ಓದಿ: 3ನೇ ಅಲೆ ಅಪ್ಪಳಿಸುವ ಮೊದಲೇ ಲಸಿಕೆ ನೀಡಲು ಸರ್ಕಾರ ಹರಸಾಹಸ ; ಲಸಿಕಾ ಮೇಳಕ್ಕೆ ಮತ್ತಷ್ಟು ವೇಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.