ಬಾಗೇಪಲ್ಲಿ: ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಪ್ರತಿ ಹಂತದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣ ರೆಡ್ಡಿ ತಿಳಿಸಿದರು.
ಅವರು ಬಿಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಹೆಲ್ತ್ ಕಿಟ್ ವಿತರಿಸಿ ಮಾತನಾಡಿದರು. ಆಶಾ ಕಾರ್ಯಕರ್ತೆಯರು ನಿಮ್ಮ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪ್ರತಿ ನಿತ್ಯ ಭೇಟಿಕೊಟ್ಟು ಆರೋಗ್ಯ ತಪಾಸಣೆ ಮಾಡುವಂತೆ ಸಲಹೆ ನೀಡಿದರು.
ಬಿಳ್ಳೂರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿರೀಷ್ ಕಶ್ಯಪ್ ಮಾತನಾಡಿ, ಬಿಳ್ಳೂರು ಮತ್ತು ರಾಶ್ಚೆರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರ ಪ್ರದೇಶಗಳಿಂದ ಬಂದಿರುವವರಿಗೆ ಹೋಂ ಕ್ವಾರಂಟೈನ್ ಮಾಡಲಾಗಿರುವ ಗ್ರಾಮಗಳಿಗೆ ದಿನ ಭೇಟಿ ನೀಡಿ ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದರು.