ಬಾಗೇಪಲ್ಲಿ : ಲಾಕ್ಡೌನ್ನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ನರೇಗಾ ಯೋಜನೆ ಕೂಲಿ ಕಾರ್ಮಿಕರಿಗೆ ಸಹಕಾರಿಯಾಗಿದೆ. ಹಾಗಾಗಿ ಬಡವರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿ ಹೇಳಿದರು.
ತಾಲೂಕಿನ ಬಿಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯರ್ರಗಾನಪಲ್ಲಿ ಗ್ರಾಮದಲ್ಲಿನ ನರೇಗಾ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನರೇಗಾದಲ್ಲಿ ಕಾಮಗಾರಿಯಲ್ಲಿ ಭಾಗಿಯಾಗಿರುವ ಕೂಲಿ ಕಾರ್ಮಿಕರು, ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡಬೇಕಿದೆ ಎಂದರು.
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಸರ್ಕಾರ ಮತ್ತಷ್ಟು ಬಲಪಡಿಸಬೇಕಿದೆ. ಗ್ರಾಮೀಣಾಭಿವೃದ್ಧಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ರಾಜ್ಯ ಸರ್ಕಾರದ ಜೊತೆಗೆ ವಿವಿಧ ಸರ್ಕಾರೇತರ ಸಂಸ್ಥೆಗಳು ಈ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಬಹುಮುಖ್ಯ ಪಾತ್ರವಹಿಸಬೇಕು ಎಂದರು.