ಚಿಕ್ಕಬಳ್ಳಾಪುರ: ಕರ್ನಾಟಕ-ಮಹಾರಾಷ್ಟ್ರ ನಡುವಿನ ಮಹದಾಯಿ ಹೋರಾಟ ಇನ್ನೂ ಇತ್ಯರ್ಥವಾಗಿಲ್ಲ. ಅಂತಹದರಲ್ಲಿ ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಸಿಎಂ ಯಡಿಯೂರಪ್ಪನವರು ನೀಡಿದ ಹೇಳಿಕೆಗೆ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ ಸೀಕಲ್ ರಮಣಾರೆಡ್ಡಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.
ರಾಜ್ಯದಲ್ಲಿ ಮಹದಾಯಿ ಯೋಜನೆಯ ಸಲುವಾಗಿ ಸಾಕಷ್ಟು ಹೋರಾಟಗಳನ್ನು ನಡೆಸಿದ್ದೇವೆ. ಆದರೆ ನಮ್ಮ ರಾಜ್ಯದ ಸಮಸ್ಯೆಗಳೇ ಇನ್ನೂ ಇತ್ಯಾರ್ಥವಾಗಿಲ್ಲ. ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಸೆಳೆಯಲು ಅನವಶ್ಯಕವಾದ ಕಾಟಚಾರದ ಹೇಳಿಕೆಗಳನ್ನು ನೀಡಿದ್ದಾರೆ. ಇದು ಜಾರಿಯಾಗುವುದಿಲ್ಲ, ಎಕೆಂದರೆ ಜಿಲ್ಲೆಯ ಮಾಜಿ ಸಂಸದರಾದ ವೀರಪ್ಪ ಮೊಯ್ಲಿ ನೀರಾವರಿ ವಿಚಾರವಾಗಿ ಮಂಗಳೂರಿನಲ್ಲಿ ಒಂದು ಹೇಳಿಕೆ ,ಚಿಕ್ಕಬಳ್ಳಾಪುರದಲ್ಲಿ ಒಂದು ಹೇಳಿಕೆ ನೀಡಿದ್ದರು. ಅದೇ ರೀತಿ ಮುಖ್ಯಮಂತ್ರಿಗಳು ಲಾಭ ಪಡೆಯಲು ಕಾಟಾಚಾರದ ಹೇಳಿಕೆ ನೀಡಿದ್ದಾರೆ ಎಂದರು.
ಯುವಕರಿಗೆ ಹಾಗು ರಾಜ್ಯಕ್ಕೆ ಉಪಯೋಗವಾಗುತ್ತದೆ ಎಂಬ ಸಲುವಾಗಿ ಬಿಜೆಪಿ ಪಕ್ಷಕ್ಕೆ ಮತವನ್ನು ನೀಡಿದ್ದರು. ಬಿಜೆಪಿ ಪಕ್ಷದ ಆಡಳಿತ ರಾಜ್ಯದಲ್ಲಿ ಪೂರ್ಣವಧಿಯಲ್ಲಿ ಇರುವುದಿಲ್ಲ. ಸದ್ಯಕ್ಕೆ ಆಡಳಿತ ಐಸಿಯೂನಲ್ಲಿದೆ. ಯಾವ ಸಂದರ್ಭದಲ್ಲಾದ್ರು ಬಿಳಬಹುದು.ಇಂತಹ ಪರಿಸ್ಥಿತಿ ಇದ್ದಾಗ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಈ ರೀತಿಯ ಹೇಳಿಕೆಗಳು ನೀಡುವುದು ಸರಿ ಅಲ್ಲ. ಪಕ್ಷದ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುವುದು ಸಹಜ. ಆದರೆ ಇದರಲ್ಲಿ ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಬಗೆಹರಿಸಬೇಕೆಂದು ತಿಳಿಸಿದರು.